ಬೆಂಗಳೂರು, ಜೂನ್ 21: ಕೇಶವಶಿಲ್ಪದಲ್ಲಿ ಆಯೋಜಿಸಲಾಗಿದ್ದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಇಸ್ರೋದ ನಿಕಟಪೂರ್ವ ಅಧ್ಯಕ್ಷರು ಹಾಗೂ ಚಾಣಕ್ಯ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ. ಎಸ್. ಸೋಮನಾಥ್ ಅವರು ಉಪಸ್ಥಿತರಿದ್ದು, ಯೋಗಾಭ್ಯಾಸವನ್ನು ಮಾಡಿದರು. ರಾಷ್ಟ್ರೋತ್ಥಾನ ಯೋಗ ವಿಭಾಗವು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರೋತ್ಥಾನ ಪರಿಷತ್‌ನ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ನಾ. ದಿನೇಶ್ ಹೆಗ್ಡೆಯವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅನಂತರದಲ್ಲಿ ಉಚಿತ ಆರೋಗ್ಯ ತಪಾಸಣೆಯನ್ನೂ ಮಾಡಲಾಯಿತು.